ಸರ್ಕಾರಿ ಶಾಲಾ ಮಕ್ಕಳಿಗೆ ಕತ್ತರಿ: ಶೂ-ಸಾಕ್ಸ್ ವಿಳಂಬ, ರಾಗಿ ಗಂಜಿಗೆ ತಡೆ; AIDSO ತೀವ್ರ ಆಕ್ರೋಶ



(ನ್ಯೂಸ್‌ ಕಡಬ) newskadaba.com,  ಆ.31: ಶೈಕ್ಷಣಿಕ ವರ್ಷ ಆರಂಭವಾಗಿ 3 ತಿಂಗಳು ಕಳೆದರೂ ಕರ್ನಾಟಕದ ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ನೀಡದಿರುವುದಕ್ಕೆ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ ತೀವ್ರ ವಿರೋಧ ವ್ಯಕ್ತಪಡಿಸಿದೆ.







ಸಕ್ಕರೆ ಬೆಲೆ ಏರಿಕೆಯ ನೆಪ ಹೇಳಿ ಹಲವು ಶಾಲೆಗಳಲ್ಲಿ ರಾಗಿ ಗಂಜಿ ವಿತರಣೆಯನ್ನು ನಿಲ್ಲಿಸಲಾಗಿದ್ದು, ಹಣಕಾಸಿನ ಕಾರಣ ನೀಡಿ ಮಕ್ಕಳ ಪೌಷ್ಟಿಕ ಆಹಾರಕ್ಕೆ ಕಡಿವಾಣ ಹಾಕುವುದು ಸರಿಯಲ್ಲ ಎಂದು AIDSO ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಪ್ರಶ್ನಿಸಿದ್ದಾರೆ.






ಪ್ರತಿವರ್ಷ ದೇಶದಲ್ಲಿ ಸುಮಾರು 1.4 ಕೋಟಿ ವಿದ್ಯಾರ್ಥಿಗಳು ಪದವಿ ಮುಗಿಸಿ ಹೊರಬರುತ್ತಿದ್ದಾರೆ. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿ ವಾರ್ಷಿಕವಾಗಿ ಕೇವಲ 8 ಲಕ್ಷ ಉದ್ಯೋಗಗಳನ್ನು ಮಾತ್ರ ಸೃಷ್ಟಿಸುತ್ತಿವೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.ವಿದ್ಯಾರ್ಥಿಗಳಿಗೆ ತಲುಪಬೇಕಾದ ಕಲ್ಯಾಣ ಯೋಜನೆಗಳು ಹಾಗೂ ಮೂಲ ಸೌಕರ್ಯಗಳು ಯಾವುದೇ ವಿಳಂಬವಿಲ್ಲದೆ ತಲುಪುವಂತೆ ಸರ್ಕಾರ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

error: Content is protected !!
Scroll to Top