(ನ್ಯೂಸ್ ಕಡಬ) newskadaba.com, ಆ.31: ಬೆಂಗಳೂರಿನ ಪ್ರಮುಖ ಫ್ಲೈಓವರ್‌ಗಳಲ್ಲಿ ರಸ್ತೆ ಸುರಕ್ಷತೆ ಹೆಚ್ಚಿಸಲು, ಅಪಘಾತ ನಿಯಂತ್ರಿಸಲು ಮತ್ತು ಸಂಚಾರ ದಟ್ಟಣೆ ಕಡಿಮೆ ಮಾಡಲು ನಿರ್ದಿಷ್ಟ ವಾಹನಗಳ ಸಂಚಾರವನ್ನು ನಿಷೇಧಿಸಿ ಸಂಚಾರ ಪೊಲೀಸ್ ಇಲಾಖೆ ಆದೇಶಿಸಿದೆ.ಈ ಹೊಸ ನಿಯಮವು ಸೆಪ್ಟೆಂಬರ್ 4 ರಿಂದ ಜಾರಿಗೆ ಬರಲಿದ್ದು, ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಕಾರಿಡಾರ್‌ನಲ್ಲಿ ಸೆಪ್ಟೆಂಬರ್ 11 ರಿಂದ ಅನ್ವಯವಾಗಲಿದೆ.
ಭಾರಿ ಸರಕು ಸಾಗಣೆ ವಾಹನಗಳಿಗೆ 24 ಗಂಟೆಯೂ ನಿಷೇಧ ಹೇರಲಾಗಿದೆ. ಜೊತೆಗೆ ಬೆಳಗ್ಗೆ 7:00 ರಿಂದ 11:00 ಮತ್ತು ಸಂಜೆ 4:00 ರಿಂದ ರಾತ್ರಿ 10:00 ಗಂಟೆಯವರೆಗೆ ಸರಕು ಆಟೋ ಸೇರಿದಂತೆ ಇತರೆ ಎಲ್ಲಾ ಸರಕು ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.








