ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಸೆ. 01. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ  ಹಾಸ್ಟೆಲ್‍ ಗಳ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ವರ್ಗದ ಸಾಮಾನ್ಯ ಪದವಿ ಕೋರ್ಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2026-27ನೇ ಸಾಲಿಗೆ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.







ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ/ಎಸ್.ಟಿ. ರೂ. 2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ ರೂ. 1 ಲಕ್ಷ. ವಿದ್ಯಾರ್ಥಿಗಳು ವೆಬ್‍ಸೈಟ್ https://shp.karnataka.gov.in/bcwd ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್ 30.






ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್  http://bcwd.karnataka.gov.in/ ನ್ನು ವೀಕ್ಷಿಸಬಹುದು.

 

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಗೆ ಇ-ಮೇಲ್ ಮುಖಾಂತರ ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ/ ತಾಲ್ಲೂಕು ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ (ಸಹಾಯವಾಣಿ ಸಂಖ್ಯೆ: 8050770004) ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top