ಸೆ.21ರಿಂದ ರಾಜ್ಯದಲ್ಲಿ 3 ದಿನಗಳ ವಿಶೇಷ ಅಧಿವೇಶನ: ಸಚಿವ ಸಂಪುಟ ಅನುಮೋದನೆ



(ನ್ಯೂಸ್‌ ಕಡಬ) newskadaba.com,  ಸೆ. 04. ರಾಜ್ಯ ವಿಧಾನಮಂಡಲದ ಮೂರು ದಿನಗಳ ವಿಶೇಷ ಅಧಿವೇಶನ ಕರೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಸೆಪ್ಟೆಂಬರ್ 21ರಿಂದ ಸೆಪ್ಟೆಂಬರ್ 23ರವರೆಗೆ ಈ ಕಾರ್ಯಕಲಾಪಗಳು ನಡೆಯಲಿವೆ.







ಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯಕ್ಕೆ ಅನುಮೋದನೆ ದೊರೆತಿದೆಈ ಹಿಂದೆ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಅಹೋರಾತ್ರಿ ಧರಣಿ ಹಾಗೂ ಹೋರಾಟ ನಡೆಸಿತ್ತು. ಇದರ ಬೆನ್ನಲ್ಲೇ ಕಲಾಪವನ್ನು ನಿಗದಿತ ಸಮಯಕ್ಕಿಂತ ಮೂರು ದಿನ ಮುಂಚಿತವಾಗಿಯೇ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು.






ಪ್ರಸ್ತುತ ನಿಗದಿಯಾಗಿರುವ ವಿಶೇಷ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿ ಹಾಗೂ ರಾಜ್ಯದ ಬರ ಪರಿಸ್ಥಿತಿಯ ಕುರಿತು ಪ್ರಮುಖವಾಗಿ ಚರ್ಚೆ ನಡೆಯಲಿದೆ.

error: Content is protected !!
Scroll to Top