(ನ್ಯೂಸ್ ಕಡಬ) newskadaba.com ಕಡಬ, ಜೂ.05. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 2018 -19 ನೆ ಸಾಲಿನ ಜೂ.7 ರಿಂದ ರಿಯಾಯಿತಿ ಬಸ್ ಪಾಸ್‌ಗಳನ್ನು ವಿತರಿಸಲಿದೆ.
ವಿದ್ಯಾರ್ಥಿಗಳು ಉಚಿತ ಬಸ್‌ಪಾಸ್ ಪಡೆಯಲು ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರದ ಪ್ರತಿಯನ್ನು ಲಗತ್ತಿಸಿ ಸಂಸ್ಕರಣಾ ಶುಲ್ಕ ಹಾಗೂ ಅಪಘಾತ ಪರಿಹಾರ ನಿಧಿಯ ಒಟ್ಟು 150 ರೂ. ಮೊತ್ತವನ್ನು ಪಾವತಿಸಬೇಕಿದೆ. ನಿಗಮದ ಎಲ್ಲ ಬಸ್ ನಿಲ್ದಾಣಗಳಲ್ಲಿ ಹಾಗೂ ನಿಗಮದ ವೆಬ್‌ಸೈಟ್‌ನಲ್ಲಿ (www.ksrtc.in) ಪಾಸ್ ಅರ್ಜಿಗಳು ಲಭ್ಯವಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಶಾಲೆಗಳಲ್ಲಿ ದೃಢೀಕರಿಸಿ ಸಲ್ಲಿಸಿದ್ದಲ್ಲಿ ವಿದ್ಯಾರ್ಥಿಗಳು ಅಭ್ಯಸಿಸುತ್ತಿರುವ ಶಾಲೆಗಳ ಮೂಲಕವೇ ಬಸ್ ಪಾಸ್‌ಗಳನ್ನು ವಿತರಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರ ಅಧಿಕೃತ ಪ್ರಕಟಣೆ ತಿಳಿಸಿದೆ.