ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಡೀಸೆಲ್ ಕಳ್ಳತನ: ಉಪ್ಪಿನಂಗಡಿ ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ. 04  ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬದಿ ನಿಲ್ಲಿಸಲಾಗಿದ್ದ ವಾಹನಗಳ ಡಿಸೆಲ್ ಟ್ಯಾಂಕ್‌ಗಳಿಂದ ಡಿಸೇಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ನಿವಾಸಿಗಳಾದ ಜೈಮುತ್ತಾ (23) ಹಾಗೂ ಮುತ್ತು (28) ಬಂಧಿತ ಆರೋಪಿಗಳು.ಸೆಪ್ಟೆಂಬರ್ 3ರಂದು ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದ ಉಪ್ಪಿನಂಗಡಿ ಪೊಲೀಸ್ ಸಿಬ್ಬಂದಿ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಬೊಲೆರೋ ಪಿಕ್‌ಅಪ್ ಹಾಗೂ 3 ಜನರನ್ನು ಗಮನಿಸಿ ತನಿಖೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಸುಮಾರು 20 ಲೀಟರ್ ಡಿಸೇಲ್ ತುಂಬಿದ ಕ್ಯಾನ್, ಖಾಲಿ ಕ್ಯಾನ್‌ಗಳು, ರಬ್ಬರ್ ಪೈಪ್ ಹಾಗೂ ಕೃತ್ಯಕ್ಕೆ ಬಳಸಿದ್ದ ಪಿಕ್‌ಅಪ್ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ (ಅ.ಕ್ರ: 118/2026, ಬಿ.ಎನ್.ಎಸ್.ಎಸ್. ಹಾಗೂ ಬಿ.ಎನ್.ಎಸ್. ಕಾಯ್ದೆಯಡಿ) ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Scroll to Top