(ನ್ಯೂಸ್ ಕಡಬ) newskadaba.com, ಸೆ. 07. ರಾಜ್ಯದ BPL, APL ಮತ್ತು ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಕಡ್ಡಾಯ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸೂಚಿಸಿದೆ. ಪಡಿತರ ಚೀಟಿಯಲ್ಲಿ ಹೆಸರಿರುವ ಪ್ರತಿಯೊಬ್ಬ ಸದಸ್ಯರೂ ತಮ್ಮ ಗುರುತನ್ನು ದೃಢೀಕರಿಸುವುದು ಕಡ್ಡಾಯವಾಗಿದೆ…
ಕೊನೆಯ ದಿನಾಂಕ ಸೆಪ್ಟೆಂಬರ್ 30, 2026.
ನಿಗದಿತ ಅವಧಿಯೊಳಗೆ ಇ-ಕೆವೈಸಿ ಮಾಡಿಸದಿದ್ದರೆ, ಅಂತಹ ಸದಸ್ಯರ ಹೆಸರನ್ನು ರೇಷನ್ ಕಾರ್ಡ್‌ನಿಂದ ತೆಗೆದುಹಾಕಲಾಗುವುದು. ಜೊತೆಗೆ ಉಚಿತ ಅಕ್ಕಿ ಮತ್ತು ಅನ್ನಭಾಗ್ಯ ಯೋಜನೆಯ ನಗದು ವರ್ಗಾವಣೆ ಸೌಲಭ್ಯ ಸ್ಥಗಿತಗೊಳ್ಳಲಿದೆ. ಕುಟುಂಬದ ಎಲ್ಲಾ ಸದಸ್ಯರು ರೇಷನ್ ಕಾರ್ಡ್ ಹಾಗೂ ತಮ್ಮ ಗುರುತಿನ ವಿವರಗಳೊಂದಿಗೆ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ.ವಿತರಕರ ಮೂಲಕ ಬಯೋಮೆಟ್ರಿಕ್ ನೀಡಿ ಉಚಿತವಾಗಿ ಇ-ಕೆವೈಸಿ ಪೂರ್ಣಗೊಳಿಸಬಹುದು.
ಗೂಗಲ್ ಪ್ಲೇ ಸ್ಟೋರ್‌ನಿಂದ Mera Ration ಮತ್ತು Aadhaar FaceRD ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಿಕೊಳ್ಳಿ. ಆಪ್‌ನಲ್ಲಿ ‘Aadhaar Seeding’ ಅಥವಾ e-KYC ಆಯ್ಕೆಯನ್ನು ಆಯ್ದುಕೊಂಡು ಅಗತ್ಯ ವಿವರ ನಮೂದಿಸಿ. OTP ಅಥವಾ ಫೇಸ್ ಅಥೆಂಟಿಕೇಶನ್ (ಮುಖದ ಗುರುತು) ಮೂಲಕ ಪ್ರಕ್ರಿಯೆಯನ್ನು ಸುಲಭವಾಗಿ ಪೂರ್ಣಗೊಳಿಸಬಹುದು.





