ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಉದ್ಯೋಗ ಮಾಹಿತಿ, ಜೂ.05. ಪೊಲೀಸ್ ಸಬ್ – ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ & ಮಹಿಳೆ) ಹಾಗೂ ಸೇವೆಯಲ್ಲಿರುವವರು ಒಳಗೊಂಡಂತೆ ಖಾಲಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು 2018 ನೇ ಎಪ್ರಿಲ್ 19 ಕ್ಕೆ ವಿಸ್ತರಿಸಿ ನಿಗದಿಪಡಿಸಲಾಗಿತ್ತು. ವಿಧಾನಸಭೆ ಮಾದರಿ ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದ ಕಾರಣ ನಿಗದಿಪಡಿಸಿದ ಕೊನೆಯ ದಿನಾಂಕವನ್ನು ವಿಸ್ತರಿಸಿ ಜೂನ್ 11 ಕ್ಕೆ ಪರಿಗಣಿಸಲಾಗುವುದು.

 

ಅರ್ಜಿ ಶುಲ್ಕವನ್ನು ಜೂನ್ 13 ರ ವರೆಗೆ ವಿಸ್ತರಿಸಲಾಗಿದೆ. ಬ್ಯಾಂಕ್ ವ್ಯವಹರಿಸುವ ಅವಧಿಯಲ್ಲಿ ಸಂಬಂಧಪಟ್ಟ ಬ್ಯಾಂಕ್‍ನಲ್ಲಿ ಪಾವತಿಸಲು ಅವಕಾಶ ನೀಡಲಾಗಿದೆ. ಇದಲ್ಲದೇ ಅರ್ಜಿ ಸಲ್ಲಿಸಲು ನಿಯಮಗಳಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ. ಆದರೆ ಅಭ್ಯರ್ಥಿಗಳ ವಯೋಮಿತಿ ಮತ್ತು ದಾಖಲೆಗಳಿಗೆ ವಿಸ್ತರಿಸಿದ ದಿನವನ್ನು ಜೂನ್ 11 ಕ್ಕೆ ಕೊನೆಯ ದಿನವಾಗಿ ಪರಿಗಣಿಸಲಾಗುವುದು ಹಾಗೂ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಆಯಾ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕವನ್ನೇ ಅರ್ಹತಾ ದಿನಾಂಕವಾಗಿ ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Also Read  ಈ 8 ರಾಶಿಯವರಿಗೆ ಧನಪ್ರಾಪ್ತಿ ಯೋಗ, ದಾಂಪತ್ಯದಲ್ಲಿ ಹೊಂದಾಣಿಕೆ ಯಾವುದೇ ಸಮಸ್ಯೆ ಇದ್ದರೂ ಪರಿಹಾರವಾಗುತ್ತದೆ

 

error: Content is protected !!
Scroll to Top