ಕರಾವಳಿಯ ಏಕೈಕ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಗೆ ಸಚಿವ ಸ್ಥಾನ ► ಇಂದು ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.06. ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಗೆ ಸಮ್ಮಿಶ್ರ ಸರಕಾರದ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಮುಂದುವರಿಯಲು ಕಾಂಗ್ರೆಸ್ ಹೈಕಮಾಂಡ್ ಹಸಿರು ನಿಶಾನೆ ತೋರಿದೆ.

ಬುಧವಾರ ಮಧ್ಯಾಹ್ನ ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಹಲವು ಗೊಂದಲಗಳ ನಡುವೆಯೂ ನೂತನ ಸಚಿವರ ಪಟ್ಟಿಯಲ್ಲಿ ಖಾದರ್ ಹೆಸರು ಸೇರ್ಪಡೆಯಾಗಿದೆ. ಹಿಂದಿನ ಸರ್ಕಾರದಲ್ಲಿ ಆರೋಗ್ಯ ಹಾಗು ಆಹಾರ ಸಚಿವರಾಗಿ ಸೇವೆ ಸಲ್ಲಿಸಿ ಗಮನ ಸೆಳೆದಿದ್ದ ಹಿನ್ನೆಲೆಯಲ್ಲಿ ಈ ಬಾರಿಯೂ ಮಹತ್ವದ ನಗರಾಭಿವೃದ್ಧಿ ಹಾಗು ವಸತಿ ಖಾತೆಗಳು ಸಿಗಲಿವೆ ಎನ್ನಲಾಗಿದ್ದು, ಖಾತೆ ಹಂಚಿಕೆ‌ ಪ್ರಮಾಣ ವಚನ ಸ್ವೀಕಾರದ ನಂತರ ನಡೆಯಬೇಕಿದೆ.

Also Read  ಬೆಳ್ಳಾರೆ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ➤ ಆರೋಪಿ ಅಂದರ್- ಫೋಕ್ಸೋ ಕೇಸ್ ದಾಖಲು

 

error: Content is protected !!
Scroll to Top