(ನ್ಯೂಸ್ ಕಡಬ) newskadaba.com, ಸೆ.17 . ಕನ್ನಡ ಚಿತ್ರರಂಗದ ದೈತ್ಯ ಪ್ರತಿಭೆ, ಹಿರಿಯ ನಟ ಅನಂತ್ ನಾಗ್ ಅವರಿಗೆ ಭಾರತೀಯ ಸಿನಿಮಾ ಕ್ಷೇತ್ರದ ಅತ್ಯುನ್ನತ ಬಹುಮಾನವಾದ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ ಘೋಷಣೆಯಾಗಿದೆ.

ಸೆಪ್ಟೆಂಬರ್ 22 ರಂದು ಗುಜರಾತ್‌ನ ಕೆವಾಡಿಯಾದಲ್ಲಿ ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುವುದು.ಅನಂತ್ ನಾಗ್ ಅವರ ಬಹುಮುಖ ಪ್ರತಿಭೆ ಹಾಗೂ ಕನ್ನಡ ಸೇರಿದಂತೆ ಭಾರತೀಯ ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಹಾರೈಸಿದ್ದಾರೆ.

1948 ಸೆಪ್ಟೆಂಬರ್ 4 ರಂದು ಶಿರಳ್ಳಿಯಲ್ಲಿ ಜನಿಸಿದ ಇವರು, 1973ರ ‘ಸಂಕಲ್ಪ’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದರು.ಶ್ಯಾಮ್ ಬೆನಗಲ್ ಅವರ ‘ಅಂಕುರ್’, ‘ಬಯಲುದಾರಿ’, ‘ನಾ ನಿನ್ನ ಬಿಡಲಾರೆ’ ಸೇರಿದಂತೆ 250ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ, ಪ್ರತಿಯೊಂದು ಪಾತ್ರಕ್ಕೂ ಜೀವ ತುಂಬಿದ್ದಾರೆ.




