ರೇಷನ್ ಕಾರ್ಡ್ ಇ-ಕೆವೈಸಿ ಅವಧಿ ವಿಸ್ತರಣೆ: ಬಿಪಿಎಲ್, ಎಪಿಎಲ್ ಕಾರ್ಡುದಾರರಿಗೆ ಸರ್ಕಾರದ ಬಿಗ್ ರಿಲೀಫ್

(ನ್ಯೂಸ್‌ ಕಡಬ) newskadaba.com,  ಸೆ.17 .ನ್ಯಾಯಬೆಲೆ ಅಂಗಡಿಗಳಲ್ಲಿ ಉಂಟಾಗುತ್ತಿರುವ ತೀವ್ರ ಸರ್ವರ್ ಸಮಸ್ಯೆಯಿಂದಾಗಿ ರೇಷನ್ ಕಾರ್ಡ್ ಇ-ಕೆವೈಸಿ ಪೂರ್ಣಗೊಳಿಸಲು ಎದುರಾಗಿದ್ದ ಅಡಚಣೆಯನ್ನು ಪರಿಗಣಿಸಿ, ಕರ್ನಾಟಕ ಸರ್ಕಾರ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡುದಾರರಿಗೆ ಬಿಗ್ ರಿಲೀಫ್ ನೀಡಿದೆ.ಸೆಪ್ಟೆಂಬರ್ 30ಕ್ಕೆ ಕೊನೆಗೊಳ್ಳಬೇಕಿದ್ದ ಇ-ಕೆವೈಸಿ ಪೂರ್ಣಗೊಳಿಸುವ ಅಂತಿಮ ದಿನಾಂಕವನ್ನು ಅಕ್ಟೋಬರ್ 20ರವರೆಗೆ ವಿಸ್ತರಿಸಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆದೇಶ ಹೊರಡಿಸಿದೆ.

ಸರ್ವರ್ ಸಮಸ್ಯೆಯಿಂದ ಸಾರ್ವಜನಿಕರು ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಎಲ್ಲರೂ ಸರದಿಯಲ್ಲಿ ಗಡುವಿನೊಳಗೆ ಇ-ಕೆವೈಸಿ ಪೂರ್ಣಗೊಳಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆಯಬಹುದು ಎಂದು ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ.ಅಕ್ಟೋಬರ್ 1ರಿಂದ ಜಾರಿ ದಿನಗೂಲಿ ಕಾರ್ಮಿಕರಿಗೆ ಮತ್ತು ಬಡಜನರಿಗೆ ಅನುಕೂಲವಾಗುವಂತೆ ನ್ಯಾಯಬೆಲೆ ಅಂಗಡಿಗಳ ಕೆಲಸದ ಸಮಯವನ್ನು ಬದಲಾಯಿಸಲಾಗಿದೆ. ಬೆಳಿಗ್ಗೆ: 07:00 ರಿಂದ 12:00 ರವರೆಗೆ…ಸಂಜೆ: 04:00 ರಿಂದ ರಾತ್ರಿ 08:00 ರವರೆಗೆ…

Scroll to Top