ಮಂಗಳೂರಿನಲ್ಲಿ ಪ್ರಥಮ ರಾಜ್ಯ ಸಚಿವ ಸಂಪುಟ ಸಭೆ: ‘ಪ್ರಜಾ ಸೌಧ’ದಲ್ಲಿ ಗಣ್ಯಾತಿಗಣ್ಯರ ದಂಡು

(ನ್ಯೂಸ್‌ ಕಡಬ) newskadaba.com,  ಸೆ.18 . ಮಂಗಳೂರಿನ ಪಡೀಲ್‌ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಆಡಳಿತ ಕಚೇರಿ ‘ಪ್ರಜಾ ಸೌಧ’ದ 2ನೇ ಮಹಡಿಯ ಸಭಾಂಗಣದಲ್ಲಿ ಸೆಪ್ಟೆಂಬರ್ 18, ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಅಪರಾಹ್ನ 2:30ರವರೆಗೆ ಸಭೆ ನಡೆಯಲಿದೆ.

ಮಂಗಳೂರಿನಲ್ಲಿ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಸಭಾಂಗಣವನ್ನು ಸುಂದರ ಹೂವುಗಳು ಹಾಗೂ ಕರಾವಳಿಯ ನೈಸರ್ಗಿಕ ಪರಿಸರ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ಅಪರೂಪದ ಛಾಯಾಚಿತ್ರಗಳಿಂದ ಶೃಂಗರಿಸಲಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, 33 ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಸೇರಿದಂತೆ ಸುಮಾರು 180ಕ್ಕೂ ಹೆಚ್ಚು ಗಣ್ಯರು ಹಾಗೂ ಸಿಬ್ಬಂದಿ ಭಾಗವಹಿಸುತ್ತಿದ್ದಾರೆ.ಕರಾವಳಿ ಭಾಗದ ಅಭಿವೃದ್ಧಿ, ಪ್ರವಾಸೋದ್ಯಮ ಮತ್ತು ಮೂಲಸೌಕರ್ಯ ಯೋಜನೆಗಳಿಗೆ ಈ ವಿಶೇಷ ಸಭೆಯಲ್ಲಿ ಮುಖ್ಯ ಅನುಮೋದನೆ ದೊರೆಯುವ ನಿರೀಕ್ಷೆಯಿದೆ.

Scroll to Top