ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸೆ. 23 ರಿಂದ SA-1 ಪರೀಕ್ಷೆ: ವೇಳಾಪಟ್ಟಿ ಪ್ರಕಟಿಸಿದ ಶಾಲಾ ಶಿಕ್ಷಣ ಇಲಾಖೆ

(ನ್ಯೂಸ್‌ ಕಡಬ) newskadaba.com,  ಸೆ.18 . ರಾಜ್ಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ 1ನೇ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆಯನ್ನು ಸೆಪ್ಟೆಂಬರ್ 23 ರಿಂದ 30 ರವರೆಗೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ.

ವಾರ್ಷಿಕ ಪರೀಕ್ಷೆಯ ಭಯ ಹಾಗೂ ಆತಂಕ ದೂರ ಮಾಡುವ ಉದ್ದೇಶದಿಂದ ಈ ಬಾರಿ ಪ್ರಿಪರೇಟರಿ (ಪೂರ್ವ ಸಿದ್ಧತಾ) ಮಾದರಿಯಲ್ಲೇ ಪರೀಕ್ಷೆ ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯೇ (KSEAB) ಏಕರೂಪದ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಿದೆ.

ಪರೀಕ್ಷಾ ದಿನದಂದು ಆಯುಕ್ತರ ಕಚೇರಿಯ ಮೇಲ್ವಿಚಾರಣೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಪ್ರೌಢಶಾಲೆಗಳ ಮುಖ್ಯಶಿಕ್ಷಕರ ಲಾಗಿನ್‌ಗೆ ಕಳುಹಿಸಲಾಗುತ್ತದೆ. ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದು ಪರೀಕ್ಷೆ ನಡೆಸಲಾಗುತ್ತದೆ.ವಿದ್ಯಾರ್ಥಿಗಳಲ್ಲಿ ವಾರ್ಷಿಕ ಪರೀಕ್ಷೆಯ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪಾರದರ್ಶಕತೆಯ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ನಕಲು ಮುಂತಾದ ಅಕ್ರಮಗಳಿಲ್ಲದೆ ಧೈರ್ಯವಾಗಿ ಪರೀಕ್ಷೆ ಎದುರಿಸಲು ಸಿದ್ಧಗೊಳಿಸುವುದು.

ಎಸ್‌ಎ-1 ಪರೀಕ್ಷಾ ವೇಳಾಪಟ್ಟಿ  ಸೆ. 23: ಪ್ರಥಮ ಭಾಷೆ, ಸೆ. 24: ವಿಜ್ಞಾನ, ಸೆ. 25: ತೃತೀಯ ಭಾಷೆ, ಸೆ. 26: ಸಮಾಜ ವಿಜ್ಞಾನ, ಸೆ. 28: ಗಣಿತ, ಸೆ. 29: ದ್ವಿತೀಯ ಭಾಷೆ, ಸೆ. 30: ದೈಹಿಕ ಶಿಕ್ಷಣ / ವೃತ್ತಿ ಶಿಕ್ಷಣ / ಮೌಲ್ಯ ಶಿಕ್ಷಣ.

Scroll to Top