ಜಾಲ್ಸೂರು ಪಯನೀರ್ ಪಬ್ಲಿಕ್ ಸ್ಕೂಲ್‌ನಲ್ಲಿ ‘ವಿಶ್ವ ಪರಿಸರ ದಿನಾಚರಣೆ’

(ನ್ಯೂಸ್ ಕಡಬ)‌ newskadaba.com ಸುಳ್ಯ, ಜೂ.06. ಜಾಲ್ಸೂರಿನ ಪಯನೀರ್ ಪಬ್ಲಿಕ್ ಸ್ಕೂಲ್‌ನಲ್ಲಿ ಗಿಡವನ್ನು ನೆಡುವುದರ ಮೂಲಕ ‘ವಿಶ್ವ ಪರಿಸರ ದಿನ’ವನ್ನು ಮಂಗಳವಾರದಂದು ಆಚರಿಸಲಾಯಿತು.

ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಅಬ್ದುಲ್ ರಝಾಕ್ ರವರು ಗಿಡ ನೆಟ್ಟು ಪರಿಸರ ಸಂರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ, ಸಹ ಶಿಕ್ಷಕಿಯರಾದ ದೀಕ್ಷಿತ, ಜ್ಯೋತಿ ಲಕ್ಷ್ಮಿ, ಜ್ಯೋತಿ, ಜಯಂತಿ ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Also Read  ಕುಮಾರಧಾರ ನದಿಯಲ್ಲಿ ಮೀನು ಹಿಡಿಯಲು ತೆರಳಿದ ಯುವಕರಿಬ್ಬರು ನೀರುಪಾಲು

error: Content is protected !!
Scroll to Top