
(ನ್ಯೂಸ್ ಕಡಬ) newskadaba.com, ಸೆ. 19 . ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಳಿಗ್ಗೆ ಮಂಗಳೂರಿನ ಮೀನುಗಾರಿಕೆ ಬಂದರಿನ ಧಕ್ಕೆ ಪ್ರದೇಶಕ್ಕೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಈ ವೇಳೆ ಸಚಿವ ಯು. ಟಿ. ಖಾದರ್, ಕಾಂಗ್ರೆಸ್ ಮುಖಂಡರಾದ ಪದ್ಮರಾಜ್, ಇನಾಯತ್ ಅಲಿ ಹಾಗೂ ಮೀನುಗಾರ ಸಂಘದ ಪ್ರಮುಖರು ಉಪಸ್ಥಿತರಿದ್ದರು.
ಬಿಗಿ ಪೊಲೀಸ್ ಭದ್ರತೆಯಲ್ಲಿ ಧಕ್ಕೆ ಪ್ರದೇಶದಲ್ಲಿ ಕಾಲ್ನಡಿಗೆಯಲ್ಲಿ ಸಂಚರಿಸಿದ ಅವರು, ತಾಜಾ ಮೀನುಗಳ ವಹಿವಾಟು ಹಾಗೂ ಮೀನುಗಾರಿಕಾ ಬೋಟ್‌ಗಳನ್ನು ವೀಕ್ಷಿಸಿ, ಮೀನುಗಾರರ ಕುಂದುಕೊರತೆಗಳನ್ನು ಆಲಿಸಿದರು.ಶುಕ್ರವಾರ ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಮೀನುಗಾರಿಕಾ ಕ್ಷೇತ್ರದ ಯೋಜನೆಗಳ ಬಗ್ಗೆ ಚರ್ಚಿಸಲಾಗಿದ್ದು, ಈ ಸಂಬಂಧ ಅಧಿಕಾರಿಗಳು ಮುಂದಿನ ಯೋಜನೆಗಳ ವಿವರ ನೀಡಿದರು.


ಧಕ್ಕೆ ಪ್ರದೇಶದಲ್ಲಿ ವ್ಯಾಪಾರ-ವಹಿವಾಟು ಬಂದ್ ಆಗಿರುವುದನ್ನು ಗಮನಿಸಿದ ಅವರು, ಇದಕ್ಕೆ ಕಾರಣರಾದ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸೂಚಿಸಿದ್ದಾರೆ.




