
(ನ್ಯೂಸ್ ಕಡಬ) newskadaba.com, ಸೆ. 19 . ಮಂಗಳೂರಿನ ‘ಪ್ರಜಾಸೌಧ’ದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪುತ್ತೂರಿನ ನೂತನ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಬೋಧನಾ ಆಸ್ಪತ್ರೆ ನಿರ್ಮಾಣಕ್ಕೆ ₹549.79 ಕೋಟಿ ಅನುದಾನಕ್ಕೆ ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿದೆ.
ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ಸೊಡಿಯಾಪು ಬಳಿ ಸುಸಜ್ಜಿತ ಕಾಲೇಜು, ಆಸ್ಪತ್ರೆ ಮತ್ತು ವಿದ್ಯಾರ್ಥಿ ನಿಲಯಗಳು ನಿರ್ಮಾಣವಾಗಲಿವೆ.ಸ್ಥಳೀಯ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಲಭ್ಯವಾಗುವುದರ ಜೊತೆಗೆ ಬಡ ರೋಗಿಗಳಿಗೆ ಉಚಿತ ಉನ್ನತ ದರ್ಜೆಯ ಆರೋಗ್ಯ ಸೇವೆ ಸಿಗಲಿದೆ.

ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು’ ಎಂದು ಮರುನಾಮಕರಣ ಮಾಡುವ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ/ಅಭಿಪ್ರಾಯ ಆಹ್ವಾನಿಸಲು 1 ತಿಂಗಳ ಕಾಲಾವಕಾಶ ನೀಡಿ ಅಧಿಸೂಚನೆ ಹೊರಡಿಸಲು ಸಂಪುಟ ತೀರ್ಮಾನಿಸಿದೆ.




