ಬುಡೋಳಿ: ಆ್ಯಕ್ಟಿವಾ – ಲಾರಿ ಢಿಕ್ಕಿ ► ಸವಾರ ಗಂಭೀರ



(ನ್ಯೂಸ್ ಕಡಬ) newskadaba.com ವಿಟ್ಲ, ಜೂ.07. ಮರಳು ಸಾಗಾಟದ ಲಾರಿ ಹಾಗೂ ಹೋಂಡಾ ಆ್ಯಕ್ಟಿವಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಗುರುವಾರದಂದು ನಡೆದಿದೆ.







ಉಪ್ಪಿನಂಗಡಿ ಕಡೆಗೆ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಮತ್ತು ಮಂಗಳೂರು ಕಡೆಗೆ ತೆರಳುತ್ತಿದ್ದ ಆ್ಯಕ್ಟಿವಾ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಆ್ಯಕ್ಟಿವಾ ಸವಾರ ಬೆಳ್ತಂಗಡಿ ನಿವಾಸಿ ಗಂಭೀರ ಗಾಯಗೊಂಡಿದ್ದು, ಗಾಯಾಳುವನ್ನು ಮಾಣಿಯ 108 ಆಂಬ್ಯುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.






error: Content is protected !!
Scroll to Top