
(ನ್ಯೂಸ್ ಕಡಬ) newskadaba.com, ಸೆ.21 . 2026-27ರ ಶೈಕ್ಷಣಿಕ ಸಾಲಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಬರೋಬ್ಬರಿ 19 ದಿನಗಳ ದಸರಾ ರಜೆಯನ್ನು ಪ್ರಕಟಿಸಿದೆ.
ಅಕ್ಟೋಬರ್ 2 ರಂದು ಗಾಂಧಿ ಜಯಂತಿಯ ಸಾರ್ವತ್ರಿಕ ರಜೆ ಇರುವುದರಿಂದ, ಅಕ್ಟೋಬರ್ 3 ರಿಂದ ಅಧಿಕೃತವಾಗಿ ದಸರಾ ರಜೆ ಮುಂದುವರಿಯಲಿದೆ.

ಶಾಲೆಗಳ ಪುನರಾರಂಭ ಅಕ್ಟೋಬರ್ 22, 2026 (ಗುರುವಾರ).ಹವಾಮಾನ ಅಥವಾ ಅಗತ್ಯಕ್ಕೆ ತಕ್ಕಂತೆ ಜಿಲ್ಲಾ ಮಟ್ಟದಲ್ಲಿ ರಜಾ ದಿನಗಳಲ್ಲಿ ಸಣ್ಣಪುಟ್ಟ ಬದಲಾವಣೆಗಳನ್ನು ಮಾಡುವ ಅಧಿಕಾರವನ್ನು ಆಯಾ ಜಿಲ್ಲಾ ಉಪನಿರ್ದೇಶಕರಿಗೆ ನೀಡಲಾಗಿದೆ.




