ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com, ಸೆ. 23 .ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ (Cr No. 231/2017, ಕಲಂ 324, 326, 504 IPC) ದಾಖಲಾಗಿತ್ತು.ನ್ಯಾಯಾಲಯದ ವಿಚಾರಣೆಗೆ ಗೈರುಹಾಜರಾಗಿ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನ ವಿರುದ್ಧ ಮಾನ್ಯ ನ್ಯಾಯಾಲಯವು LPC ವಾರೆಂಟ್ ಹೊರಡಿಸಿತ್ತು.


ಮಂಗಳೂರು ದಕ್ಷಿಣ ಠಾಣೆಯ ಎಎಸ್‌ಐ ಗಣೇಶ್, ಹೆಡ್‌ಕಾನ್ಸ್‌ಟೇಬಲ್ ಮಂಜುನಾಥ್ ಹಾಗೂ ಕಾನ್ಸ್‌ಟೇಬಲ್ ಮಲ್ಲಿಕ್ ಜಾನ್ ಅವರನ್ನೊಳಗೊಂಡ ತಂಡವು ಕದ್ರಿ ಮೈದಾನದ ಬಳಿ ಆರೋಪಿಯನ್ನು ಬಂಧಿಸಿದೆ.ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Scroll to Top