
(ನ್ಯೂಸ್ ಕಡಬ) newskadaba.com, ಸೆ.26 . ಜಪಾನ್‌ನ ನಗೋಯಾದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್‌ನ ಮಹಿಳೆಯರ ಕಬಡ್ಡಿ ಫೈನಲ್‌ನಲ್ಲಿ ಭಾರತೀಯ ಮಹಿಳಾ ತಂಡವು ಇರಾನ್ ವಿರುದ್ಧ 37-34 ಅಂತರದ ರೋಚಕ ಜಯ ಸಾಧಿಸಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದೆ.
ಈ ಗೆಲುವಿನೊಂದಿಗೆ ಪ್ರಸಕ್ತ ಏಷ್ಯನ್ ಗೇಮ್ಸ್ ಆವೃತ್ತಿಯಲ್ಲಿ ಭಾರತ ತನ್ನ 3ನೇ ಚಿನ್ನದ ಪದಕವನ್ನು ಜಯಿಸಿದಂತಾಗಿದೆ. ಭಾರತದ ಒಟ್ಟು ಪದಕಗಳ ಸಂಖ್ಯೆ 27ಕ್ಕೆ (3 ಚಿನ್ನ, 11 ಬೆಳ್ಳಿ, 13 ಕಂಚು) ಏರಿಕೆಯಾಗಿದ್ದು, ಪ್ರಸ್ತುತ ಪದಕಗಳ ಪಟ್ಟಿಯಲ್ಲಿ 12ನೇ ಸ್ಥಾನದಲ್ಲಿದೆ.
ಭಾರತದ ಪುರುಷರ ಕಬಡ್ಡಿ ತಂಡವೂ ಫೈನಲ್ ಪ್ರವೇಶಿಸಿದ್ದು, ಮತ್ತೊಂದು ಚಿನ್ನದ ಪದಕದ ನಿರೀಕ್ಷೆಯಲ್ಲಿದೆ.




