ಇಂದಿನಿಂದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ: ಸೇವೆಯಲ್ಲಿ ವ್ಯತ್ಯಯವಿಲ್ಲ, ಬ್ಯಾಂಕ್‌ಗಳು ಓಪನ್!

(ನ್ಯೂಸ್‌ ಕಡಬ) newskadaba.com, ಸೆ.28 .ಸೆಪ್ಟೆಂಬರ್‌ 28ರಿಂದ 30ರವರೆಗೆ ದೇಶಾದ್ಯಂತ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರವನ್ನು ಕೊನೆ ಕ್ಷಣದಲ್ಲಿ ಕೈಬಿಡಲಾಗಿದೆ.ಮುಷ್ಕರ ಮುಂದೂಡಲ್ಪಟ್ಟ ಹಿನ್ನೆಲೆಯಲ್ಲಿ ದೇಶದಾದ್ಯಂತ ಎಲ್ಲಾ ಬ್ಯಾಂಕ್‌ಗಳ ಶಾಖೆಗಳು ಹಾಗೂ ಕಚೇರಿಗಳು ಇಂದಿನಿಂದ ಎಂದಿನಂತೆ ಕಾರ್ಯನಿರ್ವಹಿಸಲಿವೆ.

ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ ಭಾನುವಾರ ತಡರಾತ್ರಿ ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ.ವಾರದ ಎಲ್ಲಾ ಶನಿವಾರಗಳಂದು ರಜೆ ಘೋಷಿಸುವ ಬೇಡಿಕೆಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಮಿತಿ ರಚಿಸಲು ಭಾರತೀಯ ಬ್ಯಾಂಕುಗಳ ಸಂಘ ಒಪ್ಪಿಕೊಂಡ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

Scroll to Top