
(ನ್ಯೂಸ್ ಕಡಬ) newskadaba.com, ಸೆ. 29 . ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆ ಬೆಂಗಳೂರು ಕಂಟೋನ್ಮೆಂಟ್–ಮಡಗಾಂವ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲು ಓಡಿಸಲಿದೆ.
ರೈಲು ಸಂಖ್ಯೆ 06597 ಬೆಂಗಳೂರು ಕಂಟೋನ್ಮೆಂಟ್–ಮಡಗಾಂವ್ ವಿಶೇಷ ಎಕ್ಸ್ಪ್ರೆಸ್ ಅ.1ರಂದು (ಗುರುವಾರ) ರಾತ್ರಿ 11.50ಕ್ಕೆ ಬೆಂಗಳೂರು ಕಂಟೋನ್ಮೆಂಟ್ನಿಂದ ಹೊರಟು, ಅ.2ರಂದು ಸಂಜೆ 6.10ಕ್ಕೆ ಮಡಗಾಂವ್ ತಲುಪಲಿದೆ.
ಮರುಪ್ರಯಾಣದಲ್ಲಿ ರೈಲು ಸಂಖ್ಯೆ 06598 ಮಡಗಾಂವ್–ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ಪ್ರೆಸ್ ಅ.4ರಂದು (ಭಾನುವಾರ) ಬೆಳಗ್ಗೆ 8.40ಕ್ಕೆ ಮಡಗಾಂವ್ನಿಂದ ಹೊರಟು, ಅದೇ ದಿನ ರಾತ್ರಿ 11.55ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.
ಬಂಟ್ವಾಳ ಸೇರಿದಂತೆ ಎರಡೂ ಮಾರ್ಗಗಳಲ್ಲಿ ಎಸ್ಎಂವಿಟಿ ಬೆಂಗಳೂರು, ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ, ಕಾರವಾರ ಮತ್ತು ಕನಕೋನ ನಿಲ್ದಾಣಗಳಲ್ಲಿ ರೈಲು ನಿಲುಗಡೆ ಹೊಂದಲಿದೆ.
23 ಬೋಗಿಗಳ ವಿಶೇಷ ರೈಲು ಒಟ್ಟು 23 ಬೋಗಿಗಳನ್ನು ಒಳಗೊಂಡಿರಲಿದೆ. ಇದರಲ್ಲಿ ಒಂದು ಎಸಿ 2-ಟೈರ್, ಮೂರು ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, ಏಳು ಸಾಮಾನ್ಯ ದ್ವಿತೀಯ ದರ್ಜೆ ಹಾಗೂ ದಿವ್ಯಾಂಗ ಸ್ನೇಹಿ ವಿಭಾಗ ಹೊಂದಿರುವ ಎರಡು ಸೆಕೆಂಡ್ ಕ್ಲಾಸ್ ಕಮ್ ಲಗೇಜ್ ಮತ್ತು ಬ್ರೇಕ್ ವ್ಯಾನ್ ಬೋಗಿಗಳು ಇರಲಿವೆ.
ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ ಕನಮಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




