
(ನ್ಯೂಸ್ ಕಡಬ) newskadaba.com, ಸೆ. 29. ನವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ‘ಗೃಹಲಕ್ಷ್ಮಿ’ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲು ಸರ್ಕಾರ ನಿರ್ಧರಿಸಿದೆ.
ಯೋಜನೆ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದರೂ, ಮುಖ್ಯಮಂತ್ರಿಗಳ ಸೂಚನೆಯಂತೆ 33ನೇ ಕಂತಿನ ಹಣ ಬಿಡುಗಡೆಗೆ ಆರ್ಥಿಕ ಇಲಾಖೆ ಹಸಿರು ನಿಶಾನೆ ತೋರಿದೆ.
ಯೋಜನೆಯ ಪರಿಷ್ಕರಣೆ ವೇಳೆಯಲ್ಲೂ ಫಲಾನುಭವಿಗಳಿಗೆ ನೀಡುವ ಹಣವನ್ನು ತಡೆಹಿಡಿಯಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.




