ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ► ಎರಡು ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.08. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಶುಕ್ರವಾರ ಹಾಗೂ ಶನಿವಾರದಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಗುರುವಾರದಿಂದ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಉಭಯ ಜಿಲ್ಲಾಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ರಜೆ‌ ನೀಡಿ ಆದೇಶಿಸಿದ್ದಾರೆ. ಭಾನುವಾರದ ವರೆಗೆ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯ‌ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.

Scroll to Top