(ನ್ಯೂಸ್ ಕಡಬ) newskadaba.com ಮಂಗಳೂರು, ಜು.14. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ನಡೆದು 10 ದಿನಗಳು ಕಳೆದರೂ ಇನ್ನೂ ಆರೋಪಿಗಳನ್ನು ಬಂಧಿಸಲಾಗಲಿಲ್ಲ. ಸರ್ಕಾರವು ಪೊಲೀಸರಿಗೆ ಬೆಂಬಲ ನೀಡದೆ ಆರೋಪಿಗಳ ಪರವಾಗಿ ನಿಂತಿದೆ. ಪಿಎಫ್ಐ ಮುಖಂಡರನ್ನು ತೀವ್ರ ವಿಚಾರಣೆಗೊಳಪಡಿಸಿದ್ದಲ್ಲಿ ಕೊಲೆ ಆರೋಪಿಗಳು ಯಾರೆಂಬುವುದು ತಿಳಿದು ಬರಲಿದೆ ಎಂದು ವಿಶ್ವ ಹಿಂದೂ ಪರಿಷತ್ ಸಂಘಟನಾ ಕಾರ್ಯದರ್ಶಿ ಗೋಪಾಲ್ ಆರೋಪಿಸಿದ್ದಾರೆ.
ಅವರು ಶುಕ್ರವಾರದಂದು ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡಲಾಗುತ್ತಿದ್ದು, ರಾತ್ರೋ ರಾತ್ರಿ ಹಿಂದೂಗಳ ಮನೆಗೆ ಪೊಲೀಸರು ದಾಳಿ ನಡೆಸುತ್ತಿದ್ದಾರೆ. ಎಸ್ಡಿಪಿಐ, ಪಿಎಫ್ಐ ಕಾರ್ಯಕರ್ತರನ್ನು ಸುಮ್ಮನೆ ಬಿಡಲಾಗುತ್ತಿದೆ. ಇನ್ನು ನಾವು ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಮನೆಗಳ ಮೇಲೆ ದಾಳಿ ಮುಂದುವರಿದಲ್ಲಿ ಮುಂದೆ ಆಗುವ ಅನಾಹುತಗಳಿಗೆ ಸರಕಾರವೇ ನೇರ ಹೊಣೆ ಎಂದು ಎಚ್ಚರಿಸಿದ್ದಾರೆ.