ಸೂಕ್ತ ಗೌರವಧನ ನೀಡಲು ಅಕ್ಷಿತ್ ಸುವರ್ಣ ಆಗ್ರಹ

(ನ್ಯೂಸ್ ಕಡಬ) newskadaba.com, ಅ. 03. ಅಂತರರಾಷ್ಟ್ರೀಯ ಅಥ್ಲೀಟ್ ಎಂ.ಆರ್. ಪೂವಮ್ಮ ಅವರನ್ನು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳ (ಜಾತ್ಯತೀತ) ಅಧ್ಯಕ್ಷ ಅಕ್ಷಿತ್ ಸುವರ್ಣ ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಿದರು.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪೂವಮ್ಮ ಅವರ ಕ್ರೀಡಾ ಸಾಧನೆಗೆ ಸಂಪೂರ್ಣ ಬೆಂಬಲ ಸೂಚಿಸಿ, ಶುಭ ಹಾರೈಸಿದ್ದಾರೆ ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.ದೇಶಕ್ಕೆ ಕೀರ್ತಿ ತಂದಿರುವ ಕ್ರೀಡಾಪಟುಗಳಿಗೆ ಕೇವಲ ಪ್ರಶಂಸೆ ಸಾಲದು; ರಾಜ್ಯ ಸರ್ಕಾರವು ಸೂಕ್ತ ಗೌರವಧನ, ಆರ್ಥಿಕ ನೆರವು ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಅಕ್ಷಿತ್ ಸುವರ್ಣ ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ಸತ್ತಾರ್ ಬಂದರು, ಯುವ ಪದಾಧಿಕಾರಿಗಳಾದ ಆದರ್ಶ ಪೂಜಾರಿ, ನಿಶಾಂತ್, ಸುಶಾಂತ್, ವಿನಿತ್ ಸೇರಿದಂತೆ ಹಲವರು ಭಾಗವಹಿಸಿದ್ದರು.




