
(ನ್ಯೂಸ್ ಕಡಬ) newskadaba.com, ಅ.05 . ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಚಂಡಮಾರುತದ ಪರಿಚಲನೆಯಿಂದಾಗಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಅಕ್ಟೋಬರ್ 11ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಭಾಗದಲ್ಲಿ ವಿಶೇಷವಾಗಿ ಮಧ್ಯಾಹ್ನ ಮತ್ತು ಸಂಜೆ ವೇಳೆಯಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಉತ್ತರ ಕನ್ನಡದಲ್ಲೂ ಹಗುರ ಮಳೆಯಾಗುವ ನಿರೀಕ್ಷೆಯಿದೆ.ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಹಾಸನದ ಸಕಲೇಶಪುರ ಭಾಗಗಳಲ್ಲಿ ಅಕ್ಟೋಬರ್ 10-11ರವರೆಗೆ ಸಂಜೆ ವೇಳೆ ಉತ್ತಮ ಮಳೆಯಾಗಲಿದೆ.
ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 6ರವರೆಗೆ ಸಂಜೆ/ರಾತ್ರಿ ಮಳೆಯಾಗಲಿದ್ದರೆ, ಉತ್ತರ ಒಳನಾಡಿನಲ್ಲಿ ಮುಂದಿನ 10 ದಿನ ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯಲಿದೆ.




