ಹಿರಿಯ ನಟಿ ಲಲಿತಮ್ಮ ನಿಧನ: ‘ಸುಂಟರಗಾಳಿ’ ಖ್ಯಾತಿಯ ಅಭಿನೇತ್ರಿ ಇನ್ನಿಲ್ಲ

(ನ್ಯೂಸ್‌ ಕಡಬ) newskadaba.com, ಅ.05 . ಸಿನಿಮಾಗಳು, ಕಿರುತೆರೆ ಹಾಗೂ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ಹಿರಿಯ ನಟಿ ಲಲಿತಮ್ಮ (65) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.ಕಳೆದ ಎರಡೂವರೆ ತಿಂಗಳಿನಿಂದ ಸ್ಟ್ರೋಕ್‌ನಿಂದ ಬಳಲುತ್ತಿದ್ದ ಅವರಿಗೆ ‘ಅಮ್ಮನ ಮಡಿಲು ಟ್ರಸ್ಟ್’ ಆಶ್ರಮದಲ್ಲಿ ಆಶ್ರಯ ಹಾಗೂ ಆರೈಕೆ ನೀಡಲಾಗುತ್ತಿತ್ತು

ದರ್ಶನ್ ಅಭಿನಯದ ‘ಸುಂಟರಗಾಳಿ’ ಚಿತ್ರದ ಖಳನಾಯಕಿ ಪಾತ್ರದ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದ ಅವರು, ‘ಜಂಗ್ಲಿ’, ‘ಲೈಫ್ ಇಷ್ಟೇನೆ’ ಹಾಗೂ ‘ರಂಗೋಲಿ’ ಧಾರಾವಾಹಿಯಲ್ಲೂ ಅಭಿನಯಿಸಿದ್ದರು.ಕೇವಲ ಸಿನಿಮಾ ಮಾತ್ರವಲ್ಲದೆ ರಂಗಭೂಮಿಯಲ್ಲಿಯೂ ಸಕ್ರಿಯರಾಗಿದ್ದ ಲಲಿತಮ್ಮ ಅವರು 180ಕ್ಕೂ ಹೆಚ್ಚು ನಾಟಕಗಳಲ್ಲಿ ನಟಿಸಿದ್ದರು. ಅವರ ನಿಧನಕ್ಕೆ ಚಿತ್ರರಂಗ ಹಾಗೂ ರಂಗಭೂಮಿಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

Scroll to Top