ಮಲ್ಪೆಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: ಆರೋಪಿಯ ಬಂಧನ

(ನ್ಯೂಸ್‌ ಕಡಬ) newskadaba.com, ಅ.05 . ಉಡುಪಿ: ಮಲ್ಪೆಯ ಬಾಬುತೋಟ ಧಕ್ಕೆಯ ಮರೈನ್ ಏಜೆನ್ಸಿ ಬಳಿ ಆಂಧ್ರಪ್ರದೇಶ ಮೂಲದ ಪರಮೇಶಿ @ ಪರಮ್ ವೇಲಿ (55) ಎಂಬವರನ್ನು ಕುತ್ತಿಗೆಗೆ ಇರಿದು ಕೊಲೆ ಮಾಡಿದ್ದ ಪ್ರಕರಣವನ್ನು ಮಲ್ಪೆ ಪೊಲೀಸರು ಭೇದಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಆರೋಪಿ ಆರೋಗ್ಯ ದಾಸ್ @ ಕಾಮಿ (55) ಎಂಬಾತನನ್ನು ಪೊಲೀಸರು ಹುಬ್ಬಳ್ಳಿ ಹೊರವಲಯದಲ್ಲಿ ಬಂಧಿಸಿದ್ದಾರೆ. ಬಂದರು ಪ್ರದೇಶದಲ್ಲಿ ಗುಜರಿ ಹೆಕ್ಕಿಕೊಂಡು ಜೀವಿಸುತ್ತಿದ್ದ ಪರಮೇಶಿ ಅವರು ಸೆ.28ರ ರಾತ್ರಿ ಕೊಲೆಯಾಗಿದ್ದು, ಸೆ.29ರ ಬೆಳಿಗ್ಗೆ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದರು.

ಉಡುಪಿ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು. ಹಾಗೂ ಮಲ್ಪೆ ಸಿಐ ರಾಮಚಂದ್ರ ನಾಯಕ್ ಮಾರ್ಗದರ್ಶನದಲ್ಲಿ, ಮಲ್ಪೆ ಪಿಎಸ್‌ಐ ಅನಿಲ್ ಕುಮಾರ್ ಡಿ. ನೇತೃತ್ವದ ಪೊಲೀಸ್ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ.

Scroll to Top