ಸರ್ಕಾರದ ಮುಖ್ಯಸ್ಥರಾಗಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ: ದೇಶಾದ್ಯಂತ ‘ಸೇವಾ ಸಂಕಲ್ಪ ಅಭಿಯಾನ’

(ನ್ಯೂಸ್‌ ಕಡಬ) newskadaba.com, ಅ. 07.  ಪ್ರಧಾನಿ ನರೇಂದ್ರ ಮೋದಿ ಅವರು ಸರ್ಕಾರದ ಮುಖ್ಯಸ್ಥರಾಗಿ ಅಕ್ಟೋಬರ್ ೭ರಂದು ಸತತ ೨೫ ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ್ದಾರೆ.೨೦೦೧ ಅಕ್ಟೋಬರ್ ೭ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಮೋದಿ, ೧೩ ವರ್ಷ ಸಿಎಂ ಆಗಿ ಹಾಗೂ ಕಳೆದ ೧೨ ವರ್ಷಗಳಿಂದ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಈ ಐತಿಹಾಸಿಕ ಮೈಲಿಗಲ್ಲಿನ ಹಿನ್ನೆಲೆಯಲ್ಲಿ ಬಿಜೆಪಿ ಸೆಪ್ಟೆಂಬರ್ ೧೭ರಿಂದ ಅಕ್ಟೋಬರ್ ೧೭ರವರೆಗೆ ಒಂದು ತಿಂಗಳ ಕಾಲ ದೇಶಾದ್ಯಂತ ‘ಸೇವಾ ಸಂಕಲ್ಪ ಅಭಿಯಾನ’ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಪ್ರಧಾನಿಯವರ ಜನಪರ ನಾಯಕತ್ವಕ್ಕೆ ಕೇಂದ್ರ ಸಚಿವ ಸಂಪುಟವು ಅಧಿಕೃತ ಅಭಿನಂದನಾ ನಿರ್ಣಯ ಅಂಗೀಕರಿಸಿದ್ದು, ಕಳೆದ ದಶಕದಲ್ಲಿ ೨೫ ಕೋಟಿಗೂ ಹೆಚ್ಚು ಜನರನ್ನು ಬಹುಆಯಾಮದ ಬಡತನದಿಂದ ಮುಕ್ತಗೊಳಿಸಿರುವುದನ್ನು ಶ್ಲಾಘಿಸಿದೆ.ಅಭಿಯಾನದ ಭಾಗವಾಗಿ ದೆಹಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಲಕ್ಷಾಂತರ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

Scroll to Top