ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಗ್ರಾಮ ಪಂಚಾಯತ್ ಸದಸ್ಯ ► ಆತ್ಮಹತ್ಯೆಗೆ ಮುನ್ನ ಸ್ನೇಹಿತರಿಗೆ ವಾಟ್ಸ್ಅಪ್ ನಲ್ಲಿ ಕಳುಹಿಸಿದ ಸಂದೇಶವೇನು ಗೊತ್ತೇ?

(ನ್ಯೂಸ್ ಕಡಬ) newskadaba.com ಉಡುಪಿ, ಜೂ.09. ವೈಯಕ್ತಿಕ ವಿಚಾರಕ್ಕೆ ಮನನೊಂದ ಗ್ರಾಮ ಪಂಚಾಯತ್ ಸದಸ್ಯರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಕಡೆಕಾರ್ ಗ್ರಾಪಂ ಸದಸ್ಯ, ಮಲ್ಪೆ ಕೊಡವೂರು ಲಕ್ಷ್ಮೀನಗರ ನಿವಾಸಿ ರಾಕೇಶ್(31) ಎಂದು ಗುರುತಿಸಲಾಗಿದೆ. ಕೌಟುಂಬಿಕ ಸಮಸ್ಯೆಯಿಂದ ಮನನೊಂದಿದ್ದ ರಾಕೇಶ್ ‘ಜೀವನದಲ್ಲಿ ನೊಂದಿದ್ದು, ನನ್ನ ಸಾವಿಗೆ ನಾನೇ ಕಾರಣ’ ಎಂದು ಆತ್ಮಹತ್ಯೆಗೆ ಮುನ್ನ ವಾಟ್ಸ್ಅಪ್ ನಲ್ಲಿ ತನ್ನ ಸ್ನೇಹಿತರಿಗೆ ಸಂದೇಶ ಕಳುಹಿಸಿದ್ದರು. ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top