
(ನ್ಯೂಸ್ ಕಡಬ) newskadaba.com, ಅ. 10 .ದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಹಾಗೂ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಧ್ರುವ್ ರಾಠಿ ಅವರನ್ನು ದೆಹಲಿ ಪೊಲೀಸರು ಶನಿವಾರ ಬೆಳಿಗ್ಗೆ ವಶಕ್ಕೆ ಪಡೆದಿದ್ದಾರೆ.
ಗುರುಗ್ರಾಮದ ನಿವಾಸದ ಹೊರಗೆ ತಡರಾತ್ರಿಯಿಂದಲೇ ಕಾವಲು ಕಾಯುತ್ತಿದ್ದ 50ಕ್ಕೂ ಹೆಚ್ಚು ಪೊಲೀಸರು, ಬೆಳಿಗ್ಗೆ 7:48ರ ಸುಮಾರಿಗೆ ಅವರ ತಾಯಿ ಬಾಗಿಲು ತೆರೆಯುತ್ತಿದ್ದಂತೆ ಮನೆ ಪ್ರವೇಶಿಸಿ ವಶಕ್ಕೆ ತೆಗೆದುಕೊಂಡಿದ್ದಾರೆ.ಅಕ್ಟೋಬರ್ 8ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಟ ಪ್ರಕಾಶ್ ರಾಜ್ ಅವರೊಂದಿಗೆ ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿ ಭಾಷಣ ಮಾಡಿದ್ದ ರಾಠಿ ವಿರುದ್ಧ, ಪೌರತ್ವ ಹಾಗೂ ವೀಸಾ ನಿಯಮಗಳ ಉಲ್ಲಂಘನೆ ಕುರಿತು ಸಮಗ್ರ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ದೂರು ಸಲ್ಲಿಕೆಯಾಗಿತ್ತು.




