ಮಂಗಳೂರು: ಕಾವೂರಿನಲ್ಲಿ ದಾರುಣ ಘಟನೆ – ಅಕ್ರಮ ಸಂಬಂಧ ಶಂಕಿಸಿ ಪತ್ನಿಯನ್ನು ಕೊಲೆ ಮಾಡಿದ ಪತಿ

(ನ್ಯೂಸ್‌ ಕಡಬ) newskadaba.com, ಅ.12 .ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ ಪತಿಯೊಬ್ಬ ತನ್ನ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ಸೋನಾಲಿ (30) ಎಂದು ಗುರುತಿಸಲಾಗಿದ್ದು, ಈಕೆಯನ್ನು ಆಕೆಯ ಪತಿ ಶಿವಲಿಂಗಪ್ಪ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

Scroll to Top