ರೇಣುಕಾಸ್ವಾಮಿ ಕೇಸ್‌: ತನಿಖಾ ಲೋಪದ ಆರೋಪ; ಪೊಲೀಸ್‌ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆಗೆ ಆದೇಶ!

(ನ್ಯೂಸ್‌ ಕಡಬ) newskadaba.com, ಅ.12 . ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದೊಡ್ಡ ತಿರುವು ಸಿಕ್ಕಿದೆ. ತನಿಖಾ ಲೋಪ ಆರೋಪ ಕೇಳಿಬಂದಿದ್ದು, ಇದಕ್ಕೆ ಸಂಬಂಧ ತನಿಖಾ ತಂಡದ ವಿರುದ್ಧ ಪೊಲೀಸ್‌ ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ.

ಪಿಎಸ್‌ಐ ವಿನಯ್ ಹಾಗೂ ತನಿಖಾಧಿಕಾರಿ ಎಸಿಪಿ ಚಂದನ್‌ಕುಮಾರ್ ನಿಜಾಂಶ ಮುಚ್ಚಿಟ್ಟಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಡಿಜಿ-ಐಜಿಪಿಗೆ ದೂರು ನೀಡಿದ್ದರು.

ಪ್ರಕರಣದ ಮಾಫಿ ಸಾಕ್ಷಿ ಪ್ರದೋಷ್ ಎಸ್. ರಾವ್‌ ಅವರ ಹೇಳಿಕೆ ದಾಖಲು ಪ್ರಕ್ರಿಯೆ 59ನೇ ಸೆಷನ್ಸ್‌ ನ್ಯಾಯಾಲಯದ ಮುಂದೆ ಮುಕ್ತಾಯಗೊಂಡಿದೆ.ಪ್ರಕರಣದ ಸಾಕ್ಷಿಗಳಾದ ನಟರಾದ ಚಿಕ್ಕಣ್ಣ ಹಾಗೂ ಯಶಸ್‌ ಸೂರ್ಯ ಅವರಿಗೆ ಅಕ್ಟೋಬರ್ 13ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸಮನ್ಸ್‌ ಜಾರಿಗೊಳಿಸಿದೆ.

Scroll to Top