ಹಾವು ಕಡಿತ ಪ್ರಕರಣ ನಿರ್ಲಕ್ಷ್ಯ: ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿ ಕಠಿಣ ಎಚ್ಚರಿಕೆ ಹಾಗೂ ನೋಟಿಸ್‌ಗೆ ಸೂಚನೆ!

(ನ್ಯೂಸ್‌ ಕಡಬ) newskadaba.com, ಅ.13. ಹಾವು ಕಡಿತಕ್ಕೊಳಗಾದ ರೋಗಿಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡದೆ ಬೇರೆ ಆಸ್ಪತ್ರೆಗಳಿಗೆ ಕಳುಹಿಸುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಹಾಗೂ ನೋಟಿಸ್ ಜಾರಿಗೊಳಿಸಲು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ.

ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಹಾವು ಕಡಿತಕ್ಕೆ ಅಗತ್ಯವಿರುವ ಚಿಕಿತ್ಸೆ ಮತ್ತು ಜೀವ ಉಳಿಸುವ ಔಷಧಿಗಳು ಲಭ್ಯವಿದ್ದು, ತಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ಯುವಂತೆ ಮನವಿ ಮಾಡಲಾಗಿದೆ.

ಹಾವು ಕಡಿತವನ್ನು ರಾಜ್ಯ ಸರ್ಕಾರವು ಅಧಿಸೂಚಿತ ಕಾಯಿಲೆಯಾಗಿ ಘೋಷಿಸಿರುವುದರಿಂದ, ದಾಖಲಾಗುವ ಪ್ರತಿಯೊಂದು ಪ್ರಕರಣದ ಮಾಹಿತಿಯನ್ನು ಆಸ್ಪತ್ರೆಗಳು ಆರೋಗ್ಯ ಇಲಾಖೆಗೆ ನೀಡುವುದು ಕಡ್ಡಾಯವಾಗಿದೆ.

Scroll to Top