ಮಾಣಿ ಬಸ್ – ಬೈಕ್ ಢಿಕ್ಕಿ ► ಗಾಯಾಳು ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಜೂ.10. ಖಾಸಗಿ ಬಸ್ ಹಾಗೂ ಬೈಕ್‌ ನಡುವೆ ಢಿಕ್ಕಿ ಸಂಭವಿಸಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶನಿವಾರದಂದು ನಡೆದಿದೆ.

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ‌ ಮಾಣಿ ಜಂಕ್ಷನ್ ನಲ್ಲಿ ಶುಕ್ರವಾರ ಬೆಳಿಗ್ಗೆ ಮಹೇಶ್ ಸಂಸ್ಥೆಯ ಖಾಸಗಿ ಬಸ್ ಹಾಗೂ ಬೈಕ್‌ ನಡುವೆ ಅಪಘಾತವಾಗಿತ್ತು. ಈ ಸಂದರ್ಭದಲ್ಲಿ ಬೈಕ್ ಬಸ್ಸಿನ ಅಡಿಗೆ ಬಿದ್ದು ಜಖಂಗೊಂಡಿದ್ದು, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಅನಂತಾಡಿ ನಿವಾಸಿ ಮೋಹನ್ ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶನಿವಾರದಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಉಳ್ಳಾಲ:  27 ಲಕ್ಷ ಮೌಲ್ಯದ ಭಾರೀ ಪ್ರಮಾಣದ ಗಾಂಜಾ‌ ವಶ   ➤ ಆರೋಪಿಗಳು ಅರೆಸ್ಟ್..!

error: Content is protected !!
Scroll to Top