
(ನ್ಯೂಸ್ ಕಡಬ) newskadaba.com, ಅ. 16. ಬೆಂಗಳೂರಿನ ಮೌರ್ಯ ಸರ್ಕಲ್ನಲ್ಲಿರುವ ಇಂಧನ ಇಲಾಖೆಯ ಬಹುಮಹಡಿ ಕಟ್ಟಡದ 6ನೇ ಮಹಡಿಯಿಂದ ಬಿದ್ದು ಕಿರಿಯ ಸಹಾಯಕ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಮೃತರನ್ನು 48 ವರ್ಷದ ವಜ್ರಕುಮಾರ್ ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ 6:30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಮೃತನಿಗೆ ಮಕ್ಕಳಿರಲಿಲ್ಲ ಹಾಗೂ ಇತ್ತೀಚೆಗೆ ವಿಚ್ಛೇದನವಾಗಿತ್ತು. ಅಲ್ಲದೆ, ತಾವಾಗಿಯೇ ಸ್ವಯಂ ನಿವೃತ್ತಿ (VRS) ಪಡೆದಿದ್ದರೂ ಹಣ ಬಾರದಿರುವ ಕಾರಣದಿಂದ ತೀವ್ರ ಮನನೊಂದಿದ್ದರು ಎನ್ನಲಾಗಿದ್ದು, ಆತ್ಮಹತ್ಯೆಗೆ ಇದೇ ಕಾರಣವಿರಬಹುದು ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ. ಈ ಕುರಿತು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.




