
(ನ್ಯೂಸ್ ಕಡಬ) newskadaba.com, ಅ. 17 . 2022ರ ಡಿಸೆಂಬರ್ನಲ್ಲಿ ನಡೆದಿದ್ದ ಭೂ ವಿವಾದ ಹಾಗೂ ಮಹಿಳೆ ಮೇಲಿನ ಹಲ್ಲೆ ಮತ್ತು ದೌರ್ಜನ್ಯ ಪ್ರಕರಣದಲ್ಲಿ ಪುತ್ತೂರು ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದೆ.ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿ.27, 2022ರಂದು ಭೂ ವಿವಾದದ ಬಳಿಕ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಲಾಗಿತ್ತು.
ಈ ಸಂಬಂಧ IPC ಸೆಕ್ಷನ್ 447, 504, 506, 323 ಮತ್ತು 354 ರಡಿ ಪ್ರಕರಣ ದಾಖಲಾಗಿತ್ತು. ಅಂದು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿದ್ದ ತನಿಖಾಧಿಕಾರಿ ಸುಬ್ರಹ್ಮಣ್ಯ ಎಚ್. ಅವರು ಸಮಗ್ರ ತನಿಖೆ ನಡೆಸಿ ಅರುಣ್ ಕುಮಾರ್, ವಿನಯ್ ಕುಮಾರ್ ಜಿ. ಹಾಗೂ ಸುಂದರ್ ಪಿ.ಎಂ. ವಿರುದ್ಧ ದೋಷಾರೋಪಪಟ್ಟಿ ಸಲ್ಲಿಸಿದ್ದರು.ಪುತ್ತೂರಿನ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು JMFC ನ್ಯಾಯಾಲಯದ ನ್ಯಾಯಾಧೀಶರಾದ ದೇವರಾಜ್ ವೈ.ಎಚ್. ಅವರು ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದ್ದಾರೆ:
IPC ಸೆಕ್ಷನ್ 323ರ ಅಡಿಯಲ್ಲಿ 6 ತಿಂಗಳು ಹಾಗೂ ಸೆಕ್ಷನ್ 354ರ ಅಡಿಯಲ್ಲಿ 2 ವರ್ಷಗಳ ಸರಳ ಜೈಲು ಶಿಕ್ಷೆ ಮತ್ತು ಒಟ್ಟು ₹10,000 ದಂಡ ವಿಧಿಸಲಾಗಿದೆ. (ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿ 3 ತಿಂಗಳು ಜೈಲು).IPC ಸೆಕ್ಷನ್ 506ರ ಅಡಿಯಲ್ಲಿ ತಲಾ 1 ವರ್ಷ ಸರಳ ಜೈಲು ಶಿಕ್ಷೆ ಹಾಗೂ ತಲಾ ₹5,000 ದಂಡ ವಿಧಿಸಿ ಆದೇಶಿಸಲಾಗಿದೆ.ಪ್ರಕರಣದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕಿ ಚೇತನಾ ದೇವಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.




