
(ನ್ಯೂಸ್ ಕಡಬ) newskadaba.com, ಅ. 17 . ಗ್ರೇಟರ್ ನೋಯ್ಡಾದ ನಂಗ್ಲಾ ಶ್ರೀಗೋಪಾಲ್ ಗ್ರಾಮದಲ್ಲಿ ಮೂರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತರನ್ನು ಮಹೇಶ್ (37), ಪತ್ನಿ ಲಲಿತಾ (35) ಮತ್ತು 3 ಮಕ್ಕಳು ಎಂದು ಗುರುತಿಸಲಾಗಿದೆ.
ಕುಟುಂಬದ ಸದಸ್ಯರು ಕೊನೆಯದಾಗಿ ನೋಡಲ್ಸ್ ಸೇವಿಸಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಆಹಾರದ ಮೂಲಕ ವಿಷ ದೇಹ ಸೇರಿರುವ ಶಂಕೆ ವ್ಯಕ್ತವಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಸಂಬಂಧ ತನಿಖೆ ನಡೆಸಲಾಗುತ್ತಿದೆ.
ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿಗೆ ನಿಖರವಾದ ಕಾರಣ ತಿಳಿದುಬರಲಿದೆ. ಘಟನೆ ಕುರಿತು ಉತ್ತರ ಪ್ರದೇಶದ ರಬೂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.




