
(ನ್ಯೂಸ್ ಕಡಬ) newskadaba.com, ಅ.19. ಸಿದ್ದಕಟ್ಟೆ ಜಂಕ್ಷನ್ನಲ್ಲಿ ಭಾನುವಾರ ರಾತ್ರಿ ಯುವಕನೊಬ್ಬನಿಗೆ ಚೂರಿಯಿಂದ ಇರಿದು ಗಾಯಗೊಳಿಸಿರುವ ಆಘಾತಕಾರಿ ಘಟನೆ ನಡೆದಿದೆ.ಸಿದ್ದಕಟ್ಟೆ ಸಮೀಪದ ಮಂಚಕಲ್ಲು ಮೇಲುಗುಡ್ಡೆ ನಿವಾಸಿ ಪ್ರಕಾಶ್ ಪೂಜಾರಿ (30) ಹಲ್ಲೆಗೊಳಗಾದ ಯುವಕ. ಇವರನ್ನು ತಕ್ಷಣವೇ ಚಿಕಿತ್ಸೆಗಾಗಿ ಮೂಡಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈಯಕ್ತಿಕ ಕ್ಷುಲ್ಲಕ ಕಾರಣಕ್ಕೆ ಸ್ಥಳೀಯ ಯುವಕರ ತಂಡವೊಂದು ಈ ಕೃತ್ಯವೆ ಎಸಗಿರುವ ಶಂಕೆ ವ್ಯಕ್ತವಾಗಿದೆ. ಪರಿಚಯಸ್ಥರೇ ಹಲ್ಲೆ ನಡೆಸಿರುವ ಅನುಮಾನವಿದ್ದು, ಘಟನೆಯ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.ಮಾಹಿತಿ ತಿಳಿದ ಕೂಡಲೇ ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆದಿದೆ.




