(ನ್ಯೂಸ್ ಕಡಬ) newskadaba.com, ಅ. 21 .ಬೆಳ್ತಂಗಡಿ ತಾಲ್ಲೂಕಿನ ಅಂಡಿಂಜೆ ಗ್ರಾಮದ ಕಾಣಲಚ್ಚಿ ಎಂಬಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಸಾರ್ವಜನಿಕವಾಗಿ ಅಕ್ರಮವಾಗಿ ನಡೆಸುತ್ತಿದ್ದ ಕೋಳಿಅಂಕದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ವೇಣೂರು ಪೊಲೀಸ್ ಠಾಣೆಯ ಪಿಎಸ್‌ಐ ಅಕ್ಷಯ ಡವಗಿ ಹಾಗೂ ಸಿಬ್ಬಂದಿ ಖಚಿತ ಮಾಹಿತಿಯ ಮೇರೆಗೆ ಈ ಕಾರ್ಯಾಚರಣೆ ನಡೆಸಿದ್ದಾರೆ.ದಾಳಿ ವೇಳೆ ಸ್ಥಳದಲ್ಲಿದ್ದ ಮೋಹನ ಗೌಡ (45), ದಿನೇಶ್ (45), ಪ್ರಶಾಂತ್ (35) ಹಾಗೂ ಧೀರಜ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರು ಬರುತ್ತಿದ್ದಂತೆ ಕೆಲವರು ಸ್ಥಳದಿಂದ ಪರಾರಿಯಾಗಿದ್ದಾರೆ.
ಅಕ್ರಮ ಚಟುವಟಿಕೆಗೆ ಬಳಸುತ್ತಿದ್ದ 7 ಅಂಕದ ಕೋಳಿಗಳು, 3 ದ್ವಿಚಕ್ರ ವಾಹನಗಳು ಹಾಗೂ 1 ಆಟೋರಿಕ್ಷಾವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.




