ಉಳ್ಳಾಲ : ನೇತ್ರಾವತಿ ನದಿ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

(ನ್ಯೂಸ್‌ ಕಡಬ) newskadaba.com, ಅ. 24 . ಕೋಟೆಪುರ ಕೋಡಿಯ ನೇತ್ರಾವತಿ ನದಿ ತೀರದ ಕುದುರು ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶುಕ್ರವಾರ ಸಂಜೆ ನಡೆದಿದೆ.

ನದಿ ತೀರದ ಕುದುರು ಪ್ರದೇಶದಲ್ಲಿ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮಾಹಿತಿ ತಿಳಿದ ಉಳ್ಳಾಲ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತ ವ್ಯಕ್ತಿಯ ಗುರುತು ಹಾಗೂ ಸಾವಿಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಈ ಕುರಿತು ಉಳ್ಳಾಲ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

Scroll to Top