
(ನ್ಯೂಸ್ ಕಡಬ) newskadaba.com, ಅ 26 . ಮಾಣಿ-ಮೈಸೂರು ಹೆದ್ದಾರಿಯ ಸುಳ್ಯದ ಗೂನಡ್ಕ ಶಾಲೆಯ ಬಳಿ ಲಾರಿ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಮಡಿಕೇರಿ ಕಡೆಯಿಂದ ಸುಳ್ಯದತ್ತ ಬರುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಕಾರಿಗೆ ಢಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.ಕಾರಿನಲ್ಲಿದ್ದ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಗಂಭೀರ ಗಾಯಗೊಂಡಿರುವ ವಿನುತ್ತಾಶ್ರಿ ಹಾಗೂ ರತ್ನ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ. ಕಾರು ಚಾಲಕ ನಾರಾಯಣ ಹಾಗೂ 4 ವರ್ಷದ ಹೆಣ್ಣು ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಈ ದುರ್ಘಟನೆ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




