ಕೆಇಎ ಮಾಸ್ಟರ್ ಪ್ಲ್ಯಾನ್: ಇನ್ಮುಂದೆ ಪರೀಕ್ಷೆಗಳಲ್ಲಿ ‘ಟ್ರಿಪಲ್ ಒಎಂಆರ್’ ಅಸ್ತ್ರ!

(ನ್ಯೂಸ್‌ ಕಡಬ) newskadaba.com, ಅ 26 . ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ತಡೆಯಲು ಮತ್ತು ಪಾರದರ್ಶಕತೆ ಕಾಯ್ದುಕೊಳ್ಳಲು ‘ಟ್ರಿಪಲ್ ಒಎಂಆರ್ ಶೀಟ್‘ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಮೌಲ್ಯಮಾಪನಕ್ಕಾಗಿ ನೇರವಾಗಿ ಕೆಇಎ ಪ್ರಾಧಿಕಾರಕ್ಕೆ ಸಲ್ಲಿಸಲಾಗುತ್ತದೆ.ಎರಡನೇ ಪ್ರತಿ ಪರೀಕ್ಷೆ ಮುಗಿದ ನಂತರ ಅಭ್ಯರ್ಥಿಗೆ ನೀಡಲಾಗುತ್ತದೆ.ಮೂರನೇ ಪ್ರತಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿಯ ಸ್ಟ್ರಾಂಗ್ ರೂಮ್‌ನಲ್ಲಿ ಸುರಕ್ಷಿತವಾಗಿ ಸಂಗ್ರಹಿಸಲಾಗುತ್ತದೆ.

ಅಕ್ಟೋಬರ್ 27ರವರೆಗೆ ನಡೆಯುವ ಭೂಮಾಪಕ, ಗ್ರಾಮ ಆಡಳಿತಾಧಿಕಾರಿ, ವಸತಿ ಶಾಲೆಗಳ ಶಿಕ್ಷಕರು, ಇಎಸ್‌ಐ ನರ್ಸಿಂಗ್ ಹಾಗೂ ಫಾರ್ಮಸಿ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗಳಲ್ಲಿ ಈ ಹೊಸ ನಿಯಮವನ್ನು ಮೊದಲ ಬಾರಿಗೆ ಜಾರಿಗೊಳಿಸಲಾಗಿದೆ.

ಮುಂದಿನ ದಿನಗಳಲ್ಲಿ ನಡೆಯುವ ಎಲ್ಲ ನೇಮಕಾತಿ ಪರೀಕ್ಷೆಗಳಲ್ಲೂ ಈ ವ್ಯವಸ್ಥೆ ಮುಂದುವರಿಯಲಿದ್ದು, ಉತ್ತರ ಪತ್ರಿಕೆಗಳ ಭದ್ರತೆ ಹಾಗೂ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

Scroll to Top