ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಇನ್ನು ಮುಂದೆ ‘ರಾಣಿ ಚೆನ್ನಮ್ಮ ಸಾರಿಗೆ ಸಂಸ್ಥೆ’: ಡಿ.ಕೆ. ಶಿವಕುಮಾರ್ ಘೋಷಣೆ

(ನ್ಯೂಸ್‌ ಕಡಬ) newskadaba.com, ಅ 26 . ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನಡೆದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದು, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯನ್ನು ‘ರಾಣಿ ಚೆನ್ನಮ್ಮ ಸಾರಿಗೆ ಸಂಸ್ಥೆ’ ಎಂದು ಮರುನಾಮಕರಣ ಮಾಡುವುದಾಗಿ ತಿಳಿಸಿದ್ದಾರೆ.

ಇದೇ ವೇಳೆ ಕಿತ್ತೂರು ಕೋಟೆ ಅಭಿವೃದ್ಧಿಗೆ ಮುಂದಿನ ಬಜೆಟ್‌ನಲ್ಲಿ ರೂ.40 ಕೋಟಿ ಅನುದಾನ ಹಾಗೂ ವೃಷಿಬೇಂದ್ರ ಏತ ನೀರಾವರಿ ಯೋಜನೆಗೆ ರೂ.500 ಕೋಟಿ ಮೀಸಲಿಡುವುದಾಗಿ ಘೋಷಿಸಿದರು. ರಾಣಿ ಕಿತ್ತೂರು ಚೆನ್ನಮ್ಮನ ಇತಿಹಾಸ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಚರ್ಚೆ ನಡೆದಿದ್ದು, ರೈತರ ಬೇಡಿಕೆಗಳ ಈಡೇರಿಕೆಗೆ ಮುಂದಿನ ದಿನಗಳಲ್ಲಿ ಸಭೆ ನಡೆಸಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

Scroll to Top