
(ನ್ಯೂಸ್ ಕಡಬ) newskadaba.com, ಅ 26 . ಬೆಸ್ಕಾಂ ವ್ಯಾಪ್ತಿಯಲ್ಲಿ ನಡೆಯುತ್ತಿರುವ ‘ಗೃಹ ಜ್ಯೋತಿ’ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಗೆ ನೀಡಿರುವ ಗಡುವು ಅಕ್ಟೋಬರ್ 31ಕ್ಕೆ ಮುಕ್ತಾಯಗೊಳ್ಳಲಿದೆ. ಇದು ದಾಖಲಾತಿ ಸಲ್ಲಿಸಲು ಕೊನೆಯ ಅವಕಾಶವಾಗಿದ್ದು, ಯಾವುದೇ ಕಾರಣಕ್ಕೂ ಗಡುವು ವಿಸ್ತರಣೆಯಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.
ಬೆಸ್ಕಾಂನ 8 ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಟ್ಟು 74,29,773 ಫಲಾನುಭವಿಗಳ ಪೈಕಿ ಅಕ್ಟೋಬರ್ 22ರ ವರೆಗೆ 73,17,687 ಗ್ರಾಹಕರ ಸಮೀಕ್ಷೆ (ಶೇ. 98.49) ಪೂರ್ಣಗೊಂಡಿದೆ.ಮನೆಗೆ ಬೀಗ ಹಾಕಿದ್ದರಿಂದ ಅಥವಾ ಇತರೆ ಕಾರಣಗಳಿಂದ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದ ಗ್ರಾಹಕರು, ಕೂಡಲೇ ಅಗತ್ಯ ದಾಖಲಾತಿಗಳೊಂದಿಗೆ ಹತ್ತಿರದ ಬೆಸ್ಕಾಂ ಉಪ ವಿಭಾಗ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ದಾಖಲೆಗಳನ್ನು ಸಲ್ಲಿಸುವಂತೆ ಮನವಿ ಮಾಡಲಾಗಿದೆ.




