ದಕ್ಷಿಣ ಕನ್ನಡದಲ್ಲಿ ಎಸ್‌ಐಆರ್ ಅಂತಿಮ ಮತದಾರರ ಪಟ್ಟಿ ಪ್ರಕಟ: ಒಟ್ಟು 9,064 ಮತದಾರರ ಹೆಸರು ಡಿಲೀಟ್!

(ನ್ಯೂಸ್‌ ಕಡಬ) newskadaba.com, ಅ. 27 . ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)-2026 ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಮೃತರು ಮತ್ತು ಶಾಶ್ವತವಾಗಿ ಸ್ಥಳಾಂತರಗೊಂಡವರು ಸೇರಿದಂತೆ ಒಟ್ಟು 9,064 ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ.

ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ನೀಡಿದ ಮಾಹಿತಿಯಂತೆ, ಜಿಲ್ಲೆಯಲ್ಲಿ ಈಗ ಒಟ್ಟು 16,78,448 ಮತದಾರರಿದ್ದಾರೆ. ಇದರಲ್ಲಿ 8,23,198 ಪುರುಷರು, 8,55,232 ಮಹಿಳೆಯರು ಹಾಗೂ 18 ತೃತೀಯ ಲಿಂಗಿಗಳು ಸೇರಿದ್ದಾರೆ. ಪರಿಷ್ಕರಣೆ ಅವಧಿಯಲ್ಲಿ ಹೊಸದಾಗಿ ಸಾವಿರಾರು ಅರ್ಜಿಗಳನ್ನು ಸ್ವೀಕರಿಸಿ ವಿಲೇವಾರಿ ಮಾಡಲಾಗಿದ್ದು, ಸಾರ್ವಜನಿಕರು ಅಧಿಕೃತ ವೆಬ್‌ಸೈಟ್‌ಗಳ ಮೂಲಕ ತಮ್ಮ ಹೆಸರುಗಳನ್ನು ಪರಿಶೀಲಿಸಿಕೊಳ್ಳಬಹುದಾಗಿದೆ.

Scroll to Top