
(ನ್ಯೂಸ್ ಕಡಬ) newskadaba.com, ಅ .28 . ಕಾಪು ಮತ್ತು ಮಟ್ಟು ಬೀಚ್‌ಗಳಿಗೆ ಆಗಮಿಸುವ ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳಿಂದ ಅಂದಾಜು 2.85 ಲಕ್ಷ ರೂಪಾಯಿ ಮೌಲ್ಯದ 5.710 ಕೆಜಿ ಗಾಂಜಾ, 225 ರೂ. ನಗದು ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಳಪು ಗ್ರಾಮದ ವಿನಯನಗರ ನಿವಾಸಿ ಆರೀಫ್ (38) ಮತ್ತು ಪಡುತೋನ್ಸೆ ಗ್ರಾಮದ ಹೂಡೆ ನಿವಾಸಿ ಅಕೀಫ್ (34).ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ಅವರ ಮಾರ್ಗದರ್ಶನದಲ್ಲಿ, ಪಿಎಸ್‌ಐ ತೇಜಸ್ವಿ ನೇತೃತ್ವದ ಪೊಲೀಸರ ತಂಡವು ಅಕ್ಟೋಬರ್ 27ರಂದು ಉಲಿಯರಗೋಳಿ ಗ್ರಾಮದ ಯಾರ್ಡ್ ಬೀಚ್ ಬಳಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆ.
ತೆಲಂಗಾಣದ ಹೈದರಾಬಾದ್‌ನಿಂದ ಈ ಗಾಂಜಾವನ್ನು ಮಾರಾಟಕ್ಕಾಗಿ ತಂದಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ.ಕಾಪು ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.




