
(ನ್ಯೂಸ್ ಕಡಬ) newskadaba.com, ಅ .30 . ದೇಶದ 9.34 ಕೋಟಿಗೂ ಅಧಿಕ ರೈತರಿಗೆ ಇಂದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 24ನೇ ಕಂತಿನ ಹಣ ವರ್ಗಾವಣೆಯಾಗಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರಿಂದ ಇಂದು ಬೆಳಗ್ಗೆ 10 ಗಂಟೆಗೆ ಗುಜರಾತ್ನ ಬನಸ್ಕಾಂಠ ಜಿಲ್ಲೆಯ ಭಿಲ್ಡಿಯಲ್ಲಿ ಹಣ ಬಿಡುಗಡೆಯಾಗಲಿದೆ. ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ತಲಾ 2,000 ರೂಪಾಯಿ ನೇರ ಜಮೆಯಾಗಲಿದೆ. ಒಟ್ಟು 18,690 ಕೋಟಿ ರೂಪಾಯಿಗೂ ಅಧಿಕ ಮೊತ್ತ ವರ್ಗಾವಣೆ ಆಗಲಿದೆ. ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ ವರ್ಷಕ್ಕೆ 6,000 ರೂಪಾಯಿ ಆರ್ಥಿಕ ನೆರವು ಸಿಗಲಿದೆ. ಒಟ್ಟು 18,690 ಕೋಟಿ ರೂಪಾಯಿಗೂ ಅಧಿಕ ಮೊತ್ತ ವರ್ಗಾವಣೆ ಆಗಲಿದೆ. ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ ವರ್ಷಕ್ಕೆ 6,000 ರೂಪಾಯಿ ಆರ್ಥಿಕ ನೆರವು ಸಿಗಲಿದೆ




