ಕಡಬ ಟೌನ್ ಜುಮಾ ಮಸೀದಿ ಮುದರ್ರಿಸ್‍ಗೆ ಸನ್ಮಾನ, ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ಜು.14. ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಕಡಬ ರಹ್ಮಾನಿಯಾ ಟೌನ್ ಜುಮ್ಮಾ ಮಸೀದಿಯ ಮುದರ್ರಿಸ್ ಪಿ.ಎಂ.ಇಬ್ರಾಹಿಂ ದಾರಿಮಿಯವರನ್ನು ಜಮಾಅತ್ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜುಮ್ಮಾ ಮಸೀದಿಯ ಅಧ್ಯಕ್ಷ ಹಾಜಿ ಎಸ್. ಅಬ್ದುಲ್ ಖಾದರ್ ವಹಿಸಿದ್ದರು. ಉಪಾಧ್ಯಕ್ಷರಾದ ಮಹಮ್ಮದ್ ಮುಸ್ಲಿಯಾರ್, ಹಾಜಿ ಸಯ್ಯದ್ ಸಾಹೇಬ್ ಕಳಾರ, ಪ್ರಧಾನ ಕಾರ್ಯದರ್ಶಿ ಹಾಜಿ ಕೆ.ಎಸ್.ಅಬ್ದುಲ್ ಹಮೀದ್, ಕೋಶಾಧಿಕಾರಿ ಹಾಜಿ ಕೆ.ಅಬ್ದುಲ್ ಖಾದರ್, ಜೊತೆ ಕಾರ್ಯದರ್ಶಿ ಕೆ.ಎಂ.ಫಾರೂಕ್ ಮೊದಲಾದವರು ಶುಭಹಾರೈಸಿದರು. ಕಾರ್ಯದರ್ಶಿ ಅಶ್ರಫ್ ಶೇಡಿಗುಂಡಿ ಸ್ವಾಗತಿಸಿ, ಹಾಜಿ ಹನೀಫ್ ಕೆ.ಎಂ.ವಂದಿಸಿದರು.

Also Read  ಅಪರಿಚಿತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ

error: Content is protected !!
Scroll to Top